ಹಾಡಹಗಲೇ ನಡೆದಿದೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಘಟನೆ

ಪಟ್ನಾ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ.

ಮಾರ್ಚ್ 8 ರಂದು ಬಿಹಾರದ ಪಟ್ನಾದ ಪೆಟಿಯಾ ಬಜಾರ್‌ನಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ.

ಪ್ರಿಯಾ ಧೋತ್ರೆ ಎಂಬ ಪ್ರಾಣಿ ಪ್ರೇಮಿ ಈ ಆಘಾತಕಾರಿ ವೀಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಹೋಳಿ ದಿನದಂದು ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿರುವ ಪ್ರಿಯಾ ಅವರು, ಬೀದಿ ನಾಯಿಯೊಂದಿಗೆ ವ್ಯಕ್ತಿಯೊಬ್ಬ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪಟ್ನಾದ ಫುಲ್ವಾರಿ ಸರೀಫ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂತಹ ಭೀಕರ ಅಪರಾಧ ಎಸಗಿರುವ ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಪ್ರಾಣಿ ದಯಾ ಸಂಘದವರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read