ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು: ವಿಡಿಯೋ ವೈರಲ್​

ಬಿಹಾರ: ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಗಲು ಹೊತ್ತಿನಲ್ಲಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿರುವ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಿಹಾರದ ಸಹರ್ಸಾದಲ್ಲಿ ನಡೆದಿರುವ ಇದರ ವಿಡಿಯೋ ವೈರಲ್​ ಆಗಿದೆ.

ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣನಗರ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ 3 ಅಥವಾ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಬಂದಿದ್ದರು. ಅಂಗಡಿಯ ಮಾಲೀಕ ಕುನಾಲ್ ಪಂಡಿತ್ ಮೇಲೆ ಗುಂಡು ಹಾರಿಸಿದ್ದಾರೆ.
ಬೈಕ್​ನಲ್ಲಿ ಹಿಂದೆ ಕುಳಿತಿದ್ದ ವ್ಯಕ್ತಿ ಗುಂಡು ಹಾರಿಸುತ್ತಿರುವುದನ್ನು ಕಂಡ ಕುನಾಲ್​ ಅವರು, ತಾವು ಕುಳಿತ ಕುರ್ಚಿಯಿಂದ ಕವರ್ ತೆಗೆದುಕೊಂಡು ಓಡಿಹೋಗುವುದನ್ನು ವಿಡಿಯೋದಲ್ಲಿ ನೋಡಬಹುದು. ಅಲ್ಲಿಯೇ ಇದ್ದ ಬಾಲಕಿಯೊಬ್ಬಳು ಭಯದಿಂದ ಓಡಿಹೋಗುವುದನ್ನು ಸಹ ಕಾಣಬಹುದಾಗಿದೆ. ಗುಂಡಿನ ಸದ್ದು ಕೇಳಿದ ಹಲವಾರು ಮಂದಿ ಮನೆಯಿಂದ ಹೊರಗೆ ಬಂದಿದ್ದಾರೆ. ಬೈಕ್​ ಸವಾರರು ಓಡಿ ಹೋಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read