ಚಲಿಸುತ್ತಿದ್ದ ಬಸ್ ನಲ್ಲೇ ಮಹಿಳೆಯೊಂದಿಗೆ ಕಂಡಕ್ಟರ್ ರಾಸಲೀಲೆ: ವಿಡಿಯೋ ವೈರಲ್; ಕೆಲಸದಿಂದ ವಜಾ

ಲಕ್ನೋ: ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ ನಲ್ಲೇ ಕಂಡಕ್ಟರ್ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ಬಸ್ ನಲ್ಲಿ ಘಟನೆ ನಡೆದಿದೆ. ಕೆಲ ಹೊತ್ತು ಕಂಡಕ್ಟರ್ ನನ್ನು ಗಮನಿಸುತ್ತಿದ್ದ ಕೆಲ ಪ್ರಯಾಣಿಕರು ಘಟನೆಯ ವಿಡಿಯೋ ರೆಕಾರ್ಡ್ ಮಾಡಿದ್ದು, ಅಂತರ್ಜಾಲದಲ್ಲಿ ವೈರಲ್ ಆಗಿದೆ.

ವಿಡಿಯೋ ಕ್ಲಿಪ್‌ನಲ್ಲಿ, ಪ್ರಯಾಣಿಕರು ಕಂಡಕ್ಟರ್ ಮತ್ತು ಮಹಿಳೆ ಕುಳಿತಿರುವ ಆಸನವನ್ನು ಸಮೀಪಿಸುತ್ತಿದ್ದಾರೆ, ಕಂಬಳಿಯಿಂದ ಮುಚ್ಚಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬಂದಿದ್ದು, ರೆಕಾರ್ಡ್ ಮಾಡುತ್ತಿದ್ದ ಪ್ರಯಾಣಿಕರನ್ನು ಕಂಡ ಕಂಡಕ್ಟರ್ ಕೋಪಗೊಂಡು ಪ್ರಯಾಣಿಕರ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸುತ್ತಾನೆ, ಇದು ಅವನ ಮತ್ತು ಪ್ರಯಾಣಿಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗುತ್ತದೆ.

ವಾಗ್ವಾದದ ವೇಳೆ, ಒಂದು ಗಂಟೆಗೂ ಹೆಚ್ಚು ಕಾಲ ರಾಸಲೀಲೆ ನಡೆಸಿದ್ದಾನೆ ಎಂದು ಪ್ರಯಾಣಿಕರೊಬ್ಬರು ವಿಡಿಯೋದಲ್ಲಿ ಹೇಳುತ್ತಿರುವುದು ಕೇಳಿಬರುತ್ತಿದೆ. ಅವರು ಆಲಂಬಾಗ್ ತಲುಪಿದ ನಂತರ ಬಸ್ ಕಂಡಕ್ಟರ್ ವಿರುದ್ಧ ದೂರು ನೀಡಲು ನಿರ್ಧರಿಸಿದ್ದರು. ಆದರೆ ದೂರು ನೀಡಿಲ್ಲ.

ಈ ಘಟನೆಯು 10 ದಿನಗಳ ಹಿಂದೆ ನಡೆದಿದೆ. ವಿಡಿಯೋ ವೈರಲ್ ಆದ ನಂತರ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ARM(ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ) ಬಸ್‌ನ ಚಾಲಕ ಮತ್ತು ಕಂಡಕ್ಟರ್ ವಿರುದ್ಧ ಕ್ರಮ ಕೈಗೊಂಡು ಅವರ ಒಪ್ಪಂದವನ್ನು ಕೊನೆಗೊಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read