Shocking | ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಫತೇಹಾಬಾದ್‌: ನ್ಯಾಯಾಲಯದ ಆವರಣದಲ್ಲಿ ಮತ್ತೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಫತೇಹಾಬಾದ್ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ಹೊರಬಿದ್ದಿದೆ. ಆರೋಪಿಯು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾತನಾಡಿದ ಡಿಎಸ್ಪಿ ಜಗದೀಶ್ ಕಾಜಲ, ಜಾಂಡ್ವಾಳ ಸೊಟ್ಟರ ಗ್ರಾಮದ ಬಬ್ಲು ಎಂಬ ವ್ಯಕ್ತಿ ಪ್ರಕರಣವೊಂದರಲ್ಲಿ ಸಾಕ್ಷಿಯಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ಬಂದಿದ್ದ. ಈ ವೇಳೆ ವಿಚಾರಣೆಯ ಮುಂದಿನ ದಿನಾಂಕದ ಬಗ್ಗೆ ಕೇಳಲು ಅವರ ವಕೀಲರ ಕೋಣೆಗೆ ಹೋಗಿದ್ದಾನೆ. ಅಲ್ಲಿ ಅವರು ಸೋನು, ಲಖನ್ ಮತ್ತು ಭಿರ್ದಾನಿಯಾ ಎಂಬ ಕೆಲವು ವ್ಯಕ್ತಿಗಳೊಂದಿಗೆ ಜಗಳವಾಡಿದರು. ಈ ಮೂವರು ವ್ಯಕ್ತಿಗಳು ಬಬ್ಲು ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ರು.

ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ದಾಳಿಕೋರನ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read