ತಮಿಳುನಾಡಿನಲ್ಲೊಂದು ಆಘಾತಕಾರಿ ಘಟನೆ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ಸಂಜೆ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಕೆಲಸದಿಂದ ಮನೆಗೆ ಮರಳುತ್ತಿದ್ದ ತನ್ನ ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದು, ಇದರ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಬೆಚ್ಚಿಬೀಳಿಸುವ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ.

ಪುನೀತಾ ಎಂಬಾಕೆ ಸೋಮವಾರ ಸಂಜೆ ಜನನಿಬಿಡ ರಸ್ತೆಯಲ್ಲಿ ಬರುತ್ತಿದ್ದಾಗ ಆಕೆಯ ಪತಿ, ಜೈ ಶಂಕರ್ ಅಡ್ಡಗಟ್ಟಿದ್ದಾನೆ. ಈ ವೇಳೆ ಮೊದಲಿಗೆ ಆಕೆಗೆ ಕೈನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಚಾಕುವಿನಿಂದ ಪದೇ ಪದೇ ಇರಿದಿದ್ದು, ನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಈ ದಾಳಿಯಿಂದ ಪುನೀತಾ ಕುಸಿದು ಬಿದ್ದಿದ್ದಾಳೆ.

ಜೈ ಶಂಕರ್ ಚಾಕುವಿನಿಂದ ಇರಿಯುವಾಗ ರಸ್ತೆಯಲ್ಲಿ ವಾಹನಗಳು ಓಡಾಡುತ್ತಿದ್ದರೆ ದಾರಿಹೋಕರು ಇದನ್ನು ನೋಡಿಕೊಂಡು ಹೋಗಿದ್ದಾರೆ. ಬಳಿಕ ಮಹಿಳೆಯೊಬ್ಬರು ಬಿದ್ದಿದ್ದ ಪುನೀತಾ ಬಳಿ ಬಂದಿದ್ದು ಸಾರ್ವಜನಿಕರ ನೆರವಿನಿಂದ ಅಂಬೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರೊಳಗಾಗಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ.

(The video contains disturbing images & viewer discretion is advised.)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read