HomeKarnatakaSHOCKING : 18 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕರ್ತವ್ಯ ನಿರತ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು.!

SHOCKING : 18 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕರ್ತವ್ಯ ನಿರತ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು.!

ಶಿವಮೊಗ್ಗ : ಇಲ್ಲಿನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26 ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 26ರಂದು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದಾಗ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎನ್ನಲಾಗಿದ್ದು, ಮೃತರು ಪತ್ನಿ, ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತಾಪ:

ಯುವ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಕೆಎಸ್ಆರ್‌ಪಿ 8ನೇ ಪಡೆಯ ಕಮಾಂಡೆಂಟ್ ಆದ ಎಸ್. ಯುವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕಮಾಂಡೆಂಟ್ ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular