ಜನವರಿ 22 ರಂದು ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.
ಜನವರಿ 22 ರಂದು ನಡೆಯಲಿರುವ ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಮಧ್ಯಾಹ್ನ 12.30ಕ್ಕೆ ಪ್ರಾಣ ಪ್ರತಿಷ್ಠಾನ ನಡೆಯಲಿದೆ. ಇಂದು ರಾಮ ಜನ್ಮಭೂಮಿ ನಿರ್ಮಾಣ ಸಮಿತಿಯ ಸದಸ್ಯರು ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನ ನೀಡಿದರು.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಭಾವನೆಗಳಿಂದ ತುಂಬಿದ ದಿನ. ಇದೀಗಷ್ಟೇ, ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಶ್ರೀ ರಾಮ ಮಂದಿರದಲ್ಲಿ ‘ಪ್ರಾಣ ಪ್ರತಿಷ್ಠಾ’ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದ್ದಾರೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
जय सियाराम!
आज का दिन बहुत भावनाओं से भरा हुआ है। अभी श्रीराम जन्मभूमि तीर्थ क्षेत्र ट्रस्ट के पदाधिकारी मुझसे मेरे निवास स्थान पर मिलने आए थे। उन्होंने मुझे श्रीराम मंदिर में प्राण-प्रतिष्ठा के अवसर पर अयोध्या आने के लिए निमंत्रित किया है।
मैं खुद को बहुत धन्य महसूस कर रहा… pic.twitter.com/rc801AraIn
— Narendra Modi (@narendramodi) October 25, 2023