ದೃಷ್ಟಿ ಸಮಸ್ಯೆ ಇರುವವರಿಗೆ ಬಸ್ ಗಳಲ್ಲಿ ಮೌಂಟೆಡ್‌ ಸ್ಪೀಕರ್ ಧ್ವನಿ ಸಹಾಯ

ಬೆಂಗಳೂರು: ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್‌ಗಳಲ್ಲಿ ಆನ್‌ಬೋರ್ಡ್‌ ತಂತ್ರಜ್ಞಾನ ಪರಿಚಯಿಸಲಾಗಿದೆ.

ಆನ್‌ಬೋರ್ಡ್‌ ಸಾಧನವು ದೃಷ್ಟಿ ಸಮಸ್ಯೆಯ ವ್ಯಕ್ತಿಗಳಿಗೆ ಬಸ್ ಮಾರ್ಗ ಸಂಖ್ಯೆಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಅವರು ಆ ಸಾಧನದಲ್ಲಿ ಸಂಖ್ಯೆ ಒತ್ತಿದಾಗ ಬಸ್‌ನಲ್ಲಿ ಅಳವಡಿಸಿದ್ದ ಮೌಂಟೆಡ್‌ ಸ್ಪೀಕರ್‌ ಧ್ವನಿ ಹೊರಡಿಸುತ್ತದೆ. ಇದು ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೂ ಮಾಹಿತಿ ನೀಡುವುದರಿಂದ ಅವರನ್ನು ಬಸ್‌ ಹತ್ತಿಸಲು ಸಹಾಯ ಮಾಡುತ್ತಾರೆ. ಅಲ್ಲದೇ ಇದೇ ಧ್ವನಿಯ ಆಧಾರದಲ್ಲಿ ಆ ವ್ಯಕ್ತಿಗಳು ಕೂಡ ಬಸ್‌ನ ಬಾಗಿಲಿನತ್ತ ಬರಲು ಉಪಯೋಗವಾಗುತ್ತದೆ. ಇಳಿಯಬೇಕಾದ ಸ್ಥಳದಲ್ಲಿಯೂ ಬಟನ್‌ ಒತ್ತಿದರೆ ಅವರನ್ನು ಸುರಕ್ಷಿತವಾಗಿ ಇಳಿಸಲು ಅನುಕೂಲವಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read