HomeEntertainmentಇಂದು ಬಿಡುಗಡೆಯಾಗಲಿದೆ ಒಂದು ಸರಳ ಪ್ರೇಮ ಕಥೆ ಚಿತ್ರದ ವಿಡಿಯೋ ಹಾಡು

ಇಂದು ಬಿಡುಗಡೆಯಾಗಲಿದೆ ಒಂದು ಸರಳ ಪ್ರೇಮ ಕಥೆ ಚಿತ್ರದ ವಿಡಿಯೋ ಹಾಡು

ಸಿಂಪಲ್ ಸುನಿ ನಿರ್ದೇಶನದ ವಿನಯ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ವಿಡಿಯೋ ಹಾಡು ಇಂದು ಸಂಜೆ ನಾಲ್ಕು ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗುತ್ತಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಈ ಹಾಡನ್ನು ಲಾಂಚ್ ಮಾಡಲಿದ್ದಾರೆ. ”ಗುನುಗುನುಗು” ಎಂಬ ಈ ಹಾಡಿಗೆ ಕೇಶವ್ ಆನಂದ್ ಧ್ವನಿಯಾಗಿದ್ದು, ವೀರ್ ಸಮರ್ಥ್ ಸಂಗೀತ ಸಂಯೋಜನೆ  ನೀಡಿದ್ದಾರೆ.

ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ವಿನಯ್ ರಾಜಕುಮಾರ್ ಮಲ್ಲಿಕಾಸಿಂಗ್, ಮತ್ತು ಸ್ವಾತಿಷ್ಟ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದಿ ಸಂಕಲನ, ಕಾರ್ತಿಕ್ ಶರ್ಮಾ ಮತ್ತು ಸಭಾ ಕುಮಾರ್ ಛಾಯಾಗ್ರಹಣವಿದೆ. ಮುಂದಿನ ತಿಂಗಳು ಫೆಬ್ರವರಿ ಎಂಟಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular