HomeIndiaBREAKING NEWS: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ: ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್...

BREAKING NEWS: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ: ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಾವು

ಛತ್ತೀಸ್‌ ಗಢದಲ್ಲಿ ಭದ್ರತಾ ಪಡೆಗಳ ಎನ್‌ ಕೌಂಟರ್‌ ನಲ್ಲಿ ಓರ್ವ ಪೊಲೀಸ್ ಸಾವು ಕಂಡಿದ್ದು, ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ.

ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್‌ ಕೌಂಟರ್‌ ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ. ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಲ್ಲಿ ಎಕೆ-47, ಎಸ್‌ಎಲ್‌ಆರ್ ಮತ್ತು ಇತರ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬಸ್ತಾರ್ ಐಜಿ ಪಿ. ಸುಂದರರಾಜ್ ಪ್ರಕಾರ, ನಾಲ್ಕು ಜಿಲ್ಲೆಗಳ ಡಿಆರ್‌ಜಿ ಮತ್ತು ಎಸ್‌ಟಿಎಫ್ ತಂಡಗಳು ಭಾಗವಹಿಸುವುದರೊಂದಿಗೆ ಎನ್‌ಕೌಂಟರ್ ಇನ್ನೂ ಸಕ್ರಿಯವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆ ವೇಳೆ ದಾಂತೇವಾಡ ಡಿಆರ್‌ಜಿ ಹೆಡ್ ಕಾನ್ಸ್‌ ಟೇಬಲ್ ಸನ್ನು ಕರಮ್ ಕೂಡ ಹತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular