HomeKarnatakaBIG NEWS : 'ಒಂದು ದೇಶ, ಒಂದು ಚುನಾವಣೆ' ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿಎಂ...

BIG NEWS : ‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಡಳಿತಾರೂಢ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ಯ ವ್ಯವಸ್ಥೆಗೆ ವಿರುದ್ಧವಾಗಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ.

ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ. ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ.

ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular