BREAKING NEWS: ಸಮುದಾಯ ಭವನದಲ್ಲಿ ಸ್ಪೋಟ: ಒಬ್ಬರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಕೊಚ್ಚಿ: ಇಲ್ಲಿನ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಮಸ್ಸೆರಿ ಪೊಲೀಸ್ ಅಧಿಕಾರಿಯೊಬ್ಬರು, ಸ್ಫೋಟಕ್ಕೆ ಕಾರಣ ಅಥವಾ ಒಂದಕ್ಕಿಂತ ಹೆಚ್ಚು ಸ್ಪೋಟ ಸಂಭವಿಸಿದೆ ಎಂಬುದು ದೃಢಪಟ್ಟಿಲ್ಲ. ಕ್ರಿಶ್ಚಿಯನ್ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಕರೆ ಬಂದಿದ್ದು, ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಸ್ಥಳದಿಂದ ಜನರನ್ನು ಸ್ಥಳಾಂತರಿಸುವುದನ್ನು ತೋರಿಸಿದೆ. ಕನ್ವೆನ್ಷನ್ ಸೆಂಟರ್‌ನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಜನರು ಭಯದಿಂದ ಕಿರುಚುತ್ತಿದ್ದರು. ಸ್ಫೋಟದ ನಂತರ ನೂರಾರು ಜನರು ಸಮಾವೇಶ ಕೇಂದ್ರದ ಹೊರಗೆ ಓಡಿ ಬಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read