ಉತ್ತರಾಖಂಡದ ಅಲಕನಂದಾ ನದಿಗೆ ಇಂದು 18 ಜನರಿದ್ದ ಬಸ್ ಉರುಳಿಬಿದ್ದಿದ್ದು, ಓರ್ವ ಮೃತಪಟ್ಟು, ಹಲವರು ನಾಪತ್ತೆಯಾಗಿದ್ದಾರೆ.
ವರದಿಗಳ ಪ್ರಕಾರ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ, ಮತ್ತು ಏಳು ಜನರು ಗಾಯಗೊಂಡಿದ್ದಾರೆ. ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ನಲ್ಲಿ 18 ಆಸನಗಳ ಬಸ್ ಅಲಕನಂದಾ ನದಿಗೆ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ, ಏಳು ಮಂದಿ ಗಾಯಗೊಂಡಿದ್ದಾರೆ. ಎಎನ್ಐ ಪ್ರಕಾರ ಎಸ್ಡಿಆರ್ಎಫ್, ಪೊಲೀಸ್ ಮತ್ತು ಆಡಳಿತ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ಪೊಲೀಸ್ ಪ್ರಧಾನ ಕಚೇರಿಯ ವಕ್ತಾರ ಐಜಿ ನೀಲೇಶ್ ಆನಂದ್ ಭರಾನೆ ಎಎನ್ಐಗೆ ತಿಳಿಸಿದ್ದಾರೆ, “ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಪ್ರದೇಶದಲ್ಲಿ ಬಸ್ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಬಸ್ನಲ್ಲಿ 18 ಜನರು ಇದ್ದರು ಎನ್ನಲಾಗಿದೆ.
ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ನಲ್ಲಿ 18 ಆಸನಗಳ ಬಸ್ ಅಲಕನಂದಾ ನದಿಗೆ ಬಿದ್ದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಎಸ್ಡಿಆರ್ಎಫ್, ಪೊಲೀಸರು ಮತ್ತು ಆಡಳಿತದ ತಂಡಗಳು ಸ್ಥಳದಲ್ಲಿವೆ.

