ಹಾಸನ: ಹಾಸನದ ಸದಾಶಿವ ನಗರದ ಖಾಸಗಿ ಬ್ಯಾಂಕ್ ನೌಕರರೊಬ್ಬರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ.
ನವೀನ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬ್ಯಾಂಕ್ ಲಾಕರ್ ನಿಂದ ಒಂದು ಕೆಜಿ ಚಿನ್ನ, 15 ಲಕ್ಷಕ್ಕೂ ಹೆಚ್ಚು ನಗದನ್ನು ಪೂಜೆಗೆ ತರಲಾಗಿತ್ತು. ಗುರುವಾರ ರಾತ್ರಿ ನವೀನ್ ಕುಟುಂಬದವರು ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದರು. ಆಗಸ್ಟ್ 23ರ ಶನಿವಾರ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಬಾಗಿಲು ಮುರಿದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ನವೀನ್ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಇದಕ್ಕಾಗಿ ಹಣವನ್ನು ಕೂಡಿಸಿ ಮನೆಯಲ್ಲಿಟ್ಟಿದ್ದರು. ಆದರೆ ಕಳ್ಳರು ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.