ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ 3 ತಿಂಗಳು ವಿವಿಧೆಡೆ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲಿ ್ಲ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ರೈಲು ಸಂಖ್ಯೆ: 17325/17326 ಬೆಳಗಾವಿ-ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ: 17391/17392 ಕೆಎಸ್‍ಆರ್ ಬೆಂಗಳೂರು-ಎಸ್‍ಎಸ್‍ಎಸ್ ಹುಬ್ಬಳ್ಳಿ, ಕೆಎಸ್‍ಆರ್ ಬೆಂಗಳೂರು ಡೈಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಮೂರು ತಿಂಗಳ ಕಾಲ ಮುಂದುವರೆಸಲಾಗಿದೆ.

ರೈಲು ಸಂಖ್ಯೆ: 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ- ಬೀ ವೀಕ್ಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಮೂರು ತಿಂಗಳು ನಿಲುಗಡೆ ಮುಂದುವರಿಯಲಿದೆ.

ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ 16575/16576 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್ ರೈಲು ಸಂಖ್ಯೆ 16539/16540 ಯಶವಂತಪುರ-ಮಂಗಳೂರು-ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‍ಪ್ರೆಸ್  ರೈಲುಗಳಿಗೆ ಆಲೂರು ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನವೆಂಬರ್ 30 ರವರೆಗೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read