HomeLive Newsಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :   ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಮಿದಾರರನ್ನು ಉತ್ತೇಜಿಸಲು Enterprenuership Programme ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಾಗೂ ತರಬೇತಿಯನ್ನು ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಪಡೆಯಲು ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.54, 5ನೇ ಮಹಡಿ, ಇಂಧನ ಭವನ, ರೇಸ್ ಕೋರ್ಸ್ ರಸ್ತೆ, ರಿನೇಸನ್ಸ್ ಹೋಟಲ್ ಎದುರು, ಬೆಂಗಳೂರು-09 ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 10 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22352929 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular