BIG NEWS: ಲೋಕಸಭೆ, ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ: ಹಲವು ಹಂತಗಳಲ್ಲಿ ಜಾರಿಗೆ ಸಲಹೆ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಎರಡು ಮಸೂದೆಗಳ ಪರಿಶೀಲನೆಗೆ ರಚಿಸಲಾದ ಜಂಟಿ ಸಂಸದೀಯ ಸಮಿತಿ ಸಭೆ ಮಂಗಳವಾರ ನಡೆದಿದೆ.

ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ಭಾರತೀಯ ಕಾನೂನು ಆಯೋಗದ ಮಾಜಿ ಅಧ್ಯಕ್ಷ ರಿತುರಾಜ್ ಅವಸ್ಥಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಏಕಕಾಲದಲ್ಲಿ ಚುನಾವಣೆ ನಡೆಸುವುದು ಸೈದ್ಧಾಂತಿಕವಾಗಿ ಸುಲಭವಾಗಿ ಕಾಣುತ್ತದೆ. ಆದರೆ, ಅದರ ಸುಗಮ ಅನುಷ್ಠಾನಕ್ಕೆ ಅನೇಕ ವಿಷಯಗಳ ಬಗ್ಗೆ ಗಮನಹರಿಸಬೇಕು ಎಂದು ನ್ಯಾಯಮೂರ್ತಿ ಲಲಿತ್ ಹೇಳಿದ್ದಾರೆ.

ಏಕಕಾಲದ ಚುನಾವಣೆಯನ್ನು ಹಂತ ಹಂತವಾಗಿ ಜಾರಿಗೊಳಿಸುವ ವಿಚಾರವು ಸೇರಿದಂತೆ ಹಲವು ಸಲಹೆಗಳನ್ನು ಅವರು ನೀಡಿದ್ದಾರೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಸಭೆಯಲ್ಲಿ ಪ್ರತಿಪಕ್ಷ ನ್ಯಾಯ ನಾಯಕರು ಟೆಕ್ಕಿಸಿದ್ದಾರೆ. ಒಂದು ದೇಶ ಒಂದು ಚುನಾವಣೆ ವಿಧಾನಸಭೆ ಜನಪ್ರತಿನಿಧಿಗಳ ಅಧಿಕಾರ ಅವಧಿ ಬಗ್ಗೆ ಗೊಂದಲ ಸೃಷ್ಟಿಸುವ ಮೂಲಕ ಪ್ರಜಾಪ್ರಭುತ್ವ ದುರ್ಬಲಗೊಳಿಸುತ್ತದೆ. ಜನರ ಹಕ್ಕುಗಳನ್ನು ಮೊಟಕುಗೊಳಿಸಿದಂತೆ ಆಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿಪಾದಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಕಾರ್ಯದರ್ಶಿ ಹಾಗೂ ಐಎಎಸ್ ಅಧಿಕಾರಿ ನಿತಿನ್ ಚಂದ್ರ ಅವರು ಸಮಿತಿಯ ಮುಂದೆ ಅಭಿಪ್ರಾಯಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read