ನವದೆಹಲಿ : ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗುರುವಾರ ರಾಷ್ಟ್ರಪತಿ ಭವನದಲ್ಲಿ ಸಲ್ಲಿಸಿತು.
8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.
ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:
• ಅಮಿತ್ ಶಾ , ಕೇಂದ್ರ ಗೃಹ ಸಚಿವ
 • ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
 • ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
 • 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
 • ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
 • ಹಿರಿಯ ವಕೀಲ ಹರೀಶ್ ಸಾಳ್ವೆ
 • ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

 
			 
		 
		 
		 
		 
		 
		 
		