ನವದೆಹಲಿ: ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಯೋಜನೆಯನ್ನು ಕೇಂದ್ರ ಸರ್ಕಾರ ಹಣಕಾಸು ಸಚಿವಾಲಯ ಶೀಘ್ರದಲ್ಲೇ ಜಾರಿಗೆ ತರಲಿದೆ.
ಕರ್ನಾಟಕದಲ್ಲಿ ಇರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕುಗಳು ವಿಲೀನವಾಗಿ ಒಂದೇ ಬ್ಯಾಂಕ್ ಆಗಿ ಕಾರ್ಯನಿರ್ವಹಿಸಲಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಾಚರಣೆಯ ದಕ್ಷತೆ ಹೆಚ್ಚಳ, ವೆಚ್ಚದ ಸಾರ್ವತ್ರಿಕರಣ, ಹಾಲಿ ಇರುವ 42 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಸಂಖ್ಯೆಯನ್ನು 28ಕ್ಕೆ ಇಳಿಸುವ ಉದ್ದೇಶದಿಂದ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಎಂಬ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ. ವಿಲೀನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಒಟ್ಟು 15 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಮುಂದಾಗಿದ್ದು, ಮೊದಲು ಈ ಬ್ಯಾಂಕುಗಳಿಗೆ ಹಣಕಾಸು ಮರುಪೂರಣ ಕಾರ್ಯ ನಡೆಯಲಿದೆ ಎಂದು ಹೇಳಲಾಗಿದೆ.