HomeKarnatakaನಿಯಮ ಉಲ್ಲಂಘಿಸಿ ಒನ್ ವೇ ಸಂಚಾರ: ಕೇವಲ 4 ದಿನದಲ್ಲಿ 11,498 ಕೇಸ್ ದಾಖಲು

ನಿಯಮ ಉಲ್ಲಂಘಿಸಿ ಒನ್ ವೇ ಸಂಚಾರ: ಕೇವಲ 4 ದಿನದಲ್ಲಿ 11,498 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಸಮರ ಸಾರಿದ್ದಾರೆ. ಇದರ ಬೆನ್ನಲ್ಲೇ ನಿಯಮ ಉಲ್ಲಂಘಿಸಿ ಏಕಮುಖ ಸಂಚಾರ ಮಾಡುತ್ತಿರುವ ಸವಾರರ ವಿರುದ್ಧವೂ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕೇವಲ 4 ದಿನದಲ್ಲಿ ಸಂಚಾರ ಪೊಲೀಸರು 11,498 ಪ್ರಕರಣ ದಾಖಲಿಸಿದ್ದಾರೆ. ಜನವರಿ 21ರಿಂದ 24ರ ವರೆಗೆ ಕಾರ್ಯಾಚರಣೆ ನಡೆಸಿ ಸಿಸಿಟಿವಿ ಆಧಾರದ ಮೇಲೆ ಒನ್ ವೇ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ.

ಒನ್ ವೇ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಸವಾರರ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಏಕಮುಖ ವಾಹನ ಸಂಚಾರದಿಂದ ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular