ಹಾಸನ: ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿತವಾಗಿದ್ದು, ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ದೂಮಗೆರೆ ಗ್ರಾಮದಲ್ಲಿ ನಡೆದಿದೆ.
ಕಲ್ಲುಕ್ವಾರಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡ ಕೂಲಿ ಕಾರ್ಮಿಕರು ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಮಿಕರು ಚಾಮರಾಜನಗರ ಮೂಲದವರಾಗಿದ್ದಾರೆ. ಇನ್ನೂ ಕೆಲವು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಹಾಸನದ ಬಂಡೆ ದೇವರಾಜ್ ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಭಾರಿ ದುರಂತ ಸಂಭವಿಸಿದರೂ ಮುಚ್ಚಿಟ್ಟಿರುವ ಆರೋಪ ಕೇಳಿ ಬಂದಿದೆ. ಹಾಸನದ ಖಾಸಗಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
TAGGED:ಕಲ್ಲು ಕ್ವಾರಿ