HomeBusinessಗ್ರಾಹಕರಿಗೆ ಗುಡ್ ನ್ಯೂಸ್: ಬೆಲೆ ಏರಿಕೆ ನಿಯಂತ್ರಣ, ಲಭ್ಯತೆ ಹೆಚ್ಚಿಸಲು ಮಾ. 31ರವರೆಗೆ ಈರುಳ್ಳಿ ರಫ್ತು...

ಗ್ರಾಹಕರಿಗೆ ಗುಡ್ ನ್ಯೂಸ್: ಬೆಲೆ ಏರಿಕೆ ನಿಯಂತ್ರಣ, ಲಭ್ಯತೆ ಹೆಚ್ಚಿಸಲು ಮಾ. 31ರವರೆಗೆ ಈರುಳ್ಳಿ ರಫ್ತು ನಿಷೇಧ ಮುಂದುವರಿಕೆ

ನವದೆಹಲಿ: ಬೆಲೆ ಏರಿಕೆ ನಿಯಂತ್ರಣ, ಸ್ಥಳೀಯವಾಗಿ ಈರುಳ್ಳಿ ಲಭ್ಯತೆ ಹೆಚ್ಚಿಸುವ ಉದ್ದೇಶದಿಂದ ಮಾರ್ಚ್ 31ರವರೆಗೆ ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧ ಮುಂದುವರೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ಈರುಳ್ಳಿ ಮೇಲಿನ ರಫ್ತು ನಿಷೇಧ ಹಿಂಪಡೆಯಲಾಗಿದೆ ಎನ್ನುವ ವದಂತಿಗಳಿಗೆ ಕಿವಿಗೊಡಬೇಡಿ. ರಫ್ತು ನಿಷೇಧ ಜಾರಿಯಲ್ಲಿದ್ದು, ಆದೇಶದಲ್ಲಿ ಯಾವುದೇ ಮಾರ್ಪಾಡು ಮಾಡಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ಹಿಂಪಡೆದಿದೆ ಎನ್ನುವ ವದಂತಿಯಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಎರಡೇ ದಿನದಲ್ಲಿ ಶೇಕಡ 40.62ರಷ್ಟು ಏರಿಕೆಯಾಗಿದೆ. ಕೇಂದ್ರದಿಂದ ಈರುಳ್ಳಿ ರಫ್ತು ನಿಷೇಧ ಮಾರ್ಚ್ 31ರ ವರೆಗೂ ಮುಂದುವರೆಯುವ ಬಗ್ಗೆ ಸ್ಪಷ್ಟನೆ ನೀಡಿದ್ದರಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕಡಿಮೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular