HomeBusinessಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ ಕಡಿಮೆಯಾಗತೊಡಗಿದೆ.

ಒಂದು ತಿಂಗಳ ಹಿಂದೆ ಟೊಮೆಟೊ ದರ ಗಗನಕ್ಕೇರಿ ಹೊಸ ದಾಖಲೆಯನ್ನೇ ಬರೆದಿತ್ತು. ಈಗ ಈರುಳ್ಳಿ ಕೂಡ ಅದೇ ಹಾದಿಯಲ್ಲಿ ಸಾಗಿತ್ತು. ಚಿಕ್ಕಮಗಳೂರಿನಲ್ಲಿ 100 ರೂಪಾಯಿ ಗಡಿ ದಾಟಿತ್ತು. ರಾಜ್ಯದ ವಿವಿಧೆಡೆ ಕೆಜಿ ಈರುಳ್ಳಿಗೆ 70, 80, 90 ರೂಪಾಯಿವರೆಗೂ ಮಾರಾಟವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತವಾಗಿದ್ದು, ಅಲ್ಲಿಂದ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದರ ಇಳಿಕೆಯತ್ತ ಸಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular