ಟೊಮೆಟೊ ಬಳಿಕ ಈರುಳ್ಳಿ ಶಾಕ್: ಶೇ. 48ರಷ್ಟು ಏರಿಕೆಯಾದ ಈರುಳ್ಳಿ ದರ

ನಾಸಿಕ್: ಟೊಮೆಟೊ ನಂತರ ಈರುಳ್ಳಿ ದರ ಏರಿಕೆಯಾಗತೊಡಗಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಲ್ಲಿ ಕ್ವಿಂಟಲ್ ಈರುಳ್ಳಿ ದರ ಶೇಕಡ 48ರಷ್ಟು ಏರಿಕೆಯಾಗಿದ್ದು, ಮುಂದಿನ ತಿಂಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದೇಶದ ಅತಿ ದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾಗಿರುವ ಲಸಲ್ ಗಾಂವ್ ಎಪಿಎಂಸಿಯಲ್ಲಿ ಈರುಳ್ಳಿ ಸಗಟು ದರ ಆಗಸ್ಟ್ 4ರಂದು 1550 ರೂ. ಇತ್ತು. ಅದೀಗ 2300 ರೂ.ಗೆ ಏರಿಕೆ ಕಂಡಿದೆ. ಕಳೆದ 8 ತಿಂಗಳ ಅವಧಿಯಲ್ಲಿ ಈರುಳ್ಳಿಯ ಗರಿಷ್ಠ ಸಗಟು ದರ ಇದಾಗಿದೆ.

ಈರುಳ್ಳಿ ಮಾರುಕಟ್ಟೆಗೆ ಬರುವುದು ಕಡಿಮೆಯಾಗಿದೆ. ಹೀಗಾಗಿ ಬೇಡಿಕೆ ಹೆಚ್ಚಿದ್ದರಿಂದ ದರ ಏರಿಕೆ ಕಂಡಿದೆ. ಅಕ್ಟೋಬರ್ ನಲ್ಲಿ ಹೊಸ ಬೆಳೆ ಬರುವವರೆಗೆ ಬೆಲೆಗಳನ್ನು ನಿಯಂತ್ರಣದಲ್ಲಿರಲು ಮುಂದಾಗಿರುವ ಕೇಂದ್ರ ಸರ್ಕಾರ ಬಫರ್ ಸ್ಟಾಕ್ ನಿಂದ 3 ಲಕ್ಷ ಟನ್ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಮಾಹಿತಿಯ ಪ್ರಕಾರ ಚಿಲ್ಲರೆ ದರ ಕೆಜಿಗೆ 30 ರೂ. ನಷ್ಟಿದೆ. ಆದರೆ ಪೂರೈಕೆ ಕಡಿಮೆಯಾಗಿರುವುದರಿಂದ ಹೊಸ ಬೆಳೆ ಬರುವವರೆಗೆ ಈರುಳ್ಳಿ ದರ ಹೆಚ್ಚಾಗಿರುತ್ತದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read