ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ನವೋದಯ ವಿದ್ಯಾಲಯದ 2027-28 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ವಿಳಾಸ https://cbseitms.rcil.gov.in/nvs ಮೂಲಕ ಜು.31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಗಾಜನೂರು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಮತ್ತು ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ ಸಾಗರ/ ಸೊರಬ/ ಶಿಕಾರಿಪುರ/ ಭದ್ರಾವತಿ/ ಹೊಸನಗರ ತೀರ್ಥಹಳ್ಳಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾವತಿ; ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಫಸಲು ಕೊಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದ್ದು, ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜು. 31 ರೊಳಗೆ ವಿಮೆ ಕಂತನ್ನು ಪಾವತಿಸುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ

