ಗಮನಿಸಿ : ‘UPSC’, ‘ಬ್ಯಾಂಕಿಂಗ್’ ಉಚಿತ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ.!

ಬೆಂಗಳೂರು : ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿ ಪಡೆದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ,

ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳಸಾರ್ವಜನಿಕ ಸ್ವಾಮತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳು ಒಂದೇ ಅರ್ಜಿಯನ್ನು ಸಲ್ಲಿಸುವುದು. ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಮಾತ್ರ ಪಡೆಯಲು” ಅವಕಾಶವಿರುತ್ತದೆ. ಅನುದಾನದ ಲಭ್ಯತೆಗನುಗುಣವಾಗಿ ಭೌತಿಕ ಗುರಿ ಹಾಗೂ ಮಾಸಿಕ ಶಿಷ್ಯವೇತನ ನಿಗದಿಪಡಿಸಲಾಗುವುದು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read