HomeLatest Newsಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2025-26ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಬಿ ಮತ್ತು ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1,ಎಸ್ಸಿ/ಎಸ್ಟಿಯವರಿಗೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ,2ಬಿ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ. 1.00 ಲಕ್ಷದೊಳಗಿರಬೇಕು.

ಆಸಕ್ತರು ವೆಬ್ಸೈಟ್ https://shp.karnataka.gov.in/ bcwd ರಲ್ಲಿ ಜೂ.16 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಪಡೆಯುವುದು ಮತ್ತು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹಾಗೂ ಮೊ.ಸಂ.: 8050770004 / 8050770005 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular