ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಪಿಹೆಚ್‌ಡಿ ಸಂಶೋಧನಾರ್ಥಿಗಳ ಫೆಲೋಶಿಪ್‌ಗಾಗಿ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, ಪಿಹೆಚ್‌ಡಿ ಸಂಶೋಧನಾರ್ಥಿಗಳು https://sevasindhu.karnataka.gov.in/…/DepartmentServices ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳ ದೃಢೀಕೃತ ಪತ್ರಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಸಂಶೋಧನಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ, ಸಿಖ್‌ಗೆ ಸೇರಿದವರಾಗಿರಬೇಕು. ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಪೂರ್ಣಕಾಲಿಕ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳ ಪಾಲಕ ಅಥವಾ ಪೋಷಕರ ವಾರ್ಷಿಕ ಆದಾಯ ರೂ. 8 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಸರ್ಕಾರದಿಂದ ಶಾಸನಬದ್ದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು. ಈ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182 220206 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.