ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸಿಸಿ, ಭದ್ರಾವತಿ ಸಿಎಂಸಿ, ಸಾಗರ ಸಿಎಂಸಿ ಮತ್ತು ಸೊರಬ ಟಿಎಂಸಿ ಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು https://www.karnatakaone.gov.in / public/Franchisee Terms ರ ಮೂಲಕ ಮಾ. 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ ಮಂಡ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಅರಮನೆ ಹೋಟೆಲ್ ಎದರು ಮತ್ತು ಹಿಂಭಾಗ, ನಾಗಭೂಷಣ ಪೆಟ್ರೋಲ್ ಬಂಕ್, ಮಲ್ನಾಡ್ ಆಸ್ಪತ್ರೆ, ದಿಗಂತ ಮುದ್ರಣ, ಬೈಪಾಸ್ ರಸ್ತೆ, ಸುಲಾನ್ ಮೊಹಲ್ಲಾ, ಶಿವಶಂಕರ ರೈಸ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆ. 18 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 2.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

