ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಸಿ. ಮಾನ್ಯತೆ ಪಡೆದ ಶಾಲೆಗಳಲ್ಲಿ ಖಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ 2025ರ ಏಪ್ರಿಲ್ ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಆಸಕ್ತರು https://nationalawardstoteachers,education.gov.in ಮೂಲಕ ಜು. 15 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.
You Might Also Like
TAGGED:ಉತ್ತಮ ಶಿಕ್ಷಕರ ಪ್ರಶಸ್ತಿ