HomeLatest NewsBIG NEWS : 2025-26 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್...

BIG NEWS : 2025-26 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.

ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜೊತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು ಉಪನ್ಯಾಸಕರನ್ನು ಮುಖ್ಯ ಶಿಕ್ಷಕರನ್ನು ಹಾಗೂ ಪ್ರಾಂಶುಪಾಲರನ್ನು ಗುರ್ತಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸೆಪ್ಟೆಂಬರ್-05 ರಂದು ಕ್ರಮವಾಗಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡುವುದರ ಮೂಲಕ ಗೌರವಿಸುತ್ತಿವೆ.

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅಹರ್ನಿಶಿ ತೊಡಗಿಸಿ ಕೊಳ್ಳುವ ಹಲವು ಅತ್ಯುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಇದ್ದು, ಅಂತಹ ತೆರೆಮರೆಯ ಸಾಧಕರನ್ನು ಸ್ವಯಂಪ್ರೇರಿತವಾಗಿ ಗುರುತಿಸಿ ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಬೇಕೆನ್ನುವುದು ಸರ್ಕಾರದ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಶಯವಾಗಿರುತ್ತದೆ. ಇದರಿಂದಾಗಿ ರಾಜ್ಯದ ಶಿಕ್ಷಕ ವೃಂದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತಷ್ಟು ಹುರುಪಿನಿಂದ ತೊಡಗಿಸಿಕೊಳ್ಳಲು ಪ್ರೇರೇಪಣೆಯನ್ನು ಮತ್ತು ಉತ್ತೇಜನವನ್ನು ಒದಗಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸಕಾಲಿಕ ಕ್ರಮಗಳನ್ನು ವಹಿಸಬೇಕಾಗಿರುವುದು ಸಂಬಂಧಿಸಿದ ಇಲಾಖಾಧಿಕಾರಿಗಳ ಆದ್ಯ ಕರ್ತವ್ಯ ಹಾಗೂ ಪ್ರಮುಖ ಹೊಣೆಗಾರಿಕೆಯಾಗಿರುತ್ತದೆ. ಅದರಂತೆ, ಸದರಿ ಅಂಶಗಳ ಕುರಿತು ಈ ಸುತ್ತೋಲೆಯಲ್ಲಿರುವ ಮಾರ್ಗದರ್ಶಿ ಸೂತ್ರಗಳನ್ನು ಪರಿಪಾಲಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ


ಪ್ರಯುಕ್ತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣ ಮಂತ್ರಾಲಯ, ಭಾರತ ಸರ್ಕಾರ ನವದೆಹಲಿ ಇವರು ಅರ್ಹ ಶಿಕ್ಷಕರನ್ನು, ಉಪನ್ಯಾಸಕರನ್ನು ಮುಖ್ಯ ಶಿಕ್ಷಕರನ್ನು ಹಾಗೂ ಪ್ರಾಂಶುಪಾಲರನ್ನು ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲು 2018 ರಿಂದ ಜಾರಿಗೆ ತಂದಿರುವ ಆನ್-ಲೈನ್ ವ್ಯವಸ್ಥೆಯ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಸಹ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರನ್ನು ವಿಶೇಷ ಶಿಕ್ಷಕರನ್ನು ಹಾಗೂ ಮುಖ್ಯ ಶಿಕ್ಷಕರನ್ನು ಆಯ್ಕೆ ಮಾಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕವೇ ನಿರ್ವಹಿಸಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿಯನ್ನು ನೀಡಿರುತ್ತದೆ. ಈ ಪ್ರಕಾರ ಕಳೆದ ಆರು ವರ್ಷಗಳಿಂದ ಸದರಿ ಪ್ರಕ್ರಿಯೆಯನ್ನು ನಿರ್ವಹಿಸಲಾಗುತ್ತಿದೆ.
ಅದರಂತೆ, 2025-26 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್
2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ” ಪ್ರಶಸ್ತಿಗೆ ಆಯ್ಕೆಯಾಗ ಬಯಸಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಶಿಕ್ಷಕರಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ಮುಖ್ಯ ಶಿಕ್ಷಕರಿಗೆ ಇರಬೇಕಾದ ಅರ್ಹತೆಗಳು ಮತ್ತು ಅನುಸರಿಸಬೇಕಾದ ಕಾರ್ಯ ವಿಧಾನ ಕೆಳಕಂಡಂತಿದೆ.
ಅರ್ಹತೆಗಳು.

  1. ಕರ್ನಾಟಕ ರಾಜ್ಯದ, ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಅಥವಾ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ಆಗಿ ನೇಮಕವಾಗಿ / ಅನುದಾನಿತ ಪ್ರಾಥಮಿಕ ಅಥವಾ ಅನುದಾನಿತ ಪ್ರೌಢಶಾಲೆಗಳಲ್ಲಿ ಅನುದಾನಸಹಿತವಾಗಿ ಅನುಮೋದನೆಗೊಂಡು ಕನಿಷ್ಠ ಹತ್ತು ವರ್ಷಗಳ (ಈ ಸುತ್ತೋಲೆ ಹೊರಡಿಸಿರುವ ದಿನಾಂಕದಲ್ಲಿದ್ದಂತೆ) ತೃಪ್ತಿದಾಯಕ ಸೇವೆಯನ್ನು ಸಲ್ಲಿಸಿರುವ ಹಾಗೂ ಇದರಲ್ಲಿ, ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಬೋಧನೆಯನ್ನು ಮಾಡುತ್ತಿರುವ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಈ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  2. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ತಮ್ಮ ವೈಯಕ್ತಿಕ, ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಒಳಗೊಂಡ ಸಮಗ್ರ ಮಾಹಿತಿಯನ್ನು ಕಳೆದ ಐದು ವರ್ಷಗಳ ಅಂಕಿ-ಅಂಶಗಳನ್ನು ಆನ್-ಲೈನ್ ಅರ್ಜಿಯ ಮೂಲಕ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು. ಇದರಲ್ಲಿ ಕೋವಿಡ್-19 ರ ಶೈಕ್ಷಣಿಕ ವರ್ಷಗಳಲ್ಲಿ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ನಿಗದಿಪಡಿಸಿದ್ದ ಪರ್ಯಾಯ ಮಾರ್ಗಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಕಾರ್ಯಪ್ರುವೃತ್ತರಾಗಿರಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular