ಕೋಲಾರ: ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಸಾದಿಕ್ ಬಂಧಿತ ಆರೋಪಿ. ಈತ ಮುಳಬಾಗಿಲು ನಗರದ ನೂಕಲಬಂಡೆ ನಿವಾಸಿ. ಆನ್ ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ನಗದು ರೂಪದಲ್ಲಿ ಹಣ ವರ್ಗಾವಣೆ ಮಾಡಿಸಿಕೊಂಡು ಆನ್ ಲೈನ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ. ಆರೋಪಿ ಬಳಿ ಇದ್ದ 32,046 ರೂ, ಬ್ಯಾಂಕ್ ಖಾತೆ ಜಪ್ತಿ, ಎರಡು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.