ನವದೆಹಲಿ : ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಬಹುಭಾಷಾ ನಟಿ ಊರ್ವಶಿ ರೌಟೇಲಾ ಅವರಿಗೆ ಕೂಡ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿಗೊಳಿಸಿದ್ದಾರೆ.ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ ಸಂಬಂಧ ರೌಟೇಲಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಸೆಪ್ಟೆಂಬರ್ 16ರಂದು ವಿಚಾರಣೆಗೆ ಹಾಜರಾಗುವಂತೆ ಊರ್ವಶಿ ರೌಟೇಲಾಗೆ ಸೂಚನೆ ನೀಡಲಾಗಿದೆ.
ಇನ್ನೂ., ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು.

