ಬಾಗಲಕೋಟೆ: ಬಿಸಿಎ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.
ಜಮಖಂಡಿ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ರಮೇಶ್ ಬಂಟನೂರು(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಲಕ್ಷಾಂತರ ರೂಪಾಯಿ ಹಣ ಸಲಾ ಮಾಡಿಕೊಂಡಿದ್ದ. ಮಗ ಮಾಡಿದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು.
ಅಲ್ಲದೇ ಮಗನಿಗೆ ಬೆಟ್ಟಿಂಗ್ ಆಡದಂತೆ ಬೈದು ಬುದ್ಧಿವಾದ ಹೇಳಿದ್ದರು. ಮತ್ತೆ ಆನ್ ಲೈನ್ ಬೆಟ್ಟಿಂಗ್ ಆಡದಂತೆ ತಾಕೀತು ಮಾಡಿದ್ದರು. ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ನೊಂದ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ.

