ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ.
ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ವಾಹನ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಆನ್ಲೈನ್ ದಂಡಪಾವತಿ ವಿಸ್ತರಿಸಲಾಗಿದ್ದು, ಈ ಸಂಬಂಧ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆನ್ಲೈನ್ ನಲ್ಲಿ ದಂಡ ಪಾವತಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ payfine.mchallan.com7271 ವೆಬ್ಸೈಟ್ ಅಭಿವೃದ್ಧಿಪಡಿಸಲಾಗಿದೆ.
Karnataka Police has launched a website with url : https://t.co/f0wjyib8BI, to facilitate pending fine amount for the state except Bangalore City
Citizen can check the pending fine against their vehicles too“An effort to minimise inconvenience & visit to Police Station” pic.twitter.com/RfdATledgy
— alok kumar (@alokkumar6994) May 2, 2024

