HomeLatest NewsBREAKING: ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಏಕಕಾಲಕ್ಕೆ ED ಅಧಿಕಾರಿಗಳ ದಾಳಿ

BREAKING: ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಏಕಕಾಲಕ್ಕೆ ED ಅಧಿಕಾರಿಗಳ ದಾಳಿ

ನವದೆಹಲಿ: ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ವಿನ್ ಜೋ, ಗೇಮ್ಸ್ ಕ್ರಾಫ್ಟ್ ಸೇರಿದಂತೆ ವಿವಿಧ ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಆನ್ ಲೈನ್ ಗೇಮಿಂಗ್ ಕಂಪನಿಗಳ ಕಾರ್ಪೊರೇಟ್ ಕಚೇರಿ, ಸಿಇಒ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳ ತಪಾಸಣೆ ವೇಳೆ ಅಕ್ರಮ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಕ್ರೊಪ್ಟೋ ವ್ಯಾಲೆಟ್ ಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular