ಬೆಂಗಳೂರು: ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಗೇಮ್ಸ್ ಕ್ರಾಫ್ಟ್ ಕಂಪನಿ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಮ್ಮಿ ಕಲ್ಚರ್ ಆಪ್ ಮೂಲಕ ವಂಚನೆಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿಇದೆ. ದೆಹಲಿಯಲ್ಲಿ ದಾಖಲಾಗಿದ್ದ ಎಫ್ ಐಆರ್ ಆಧರಿಸಿ ಈ ದಾಳಿ ನಡೆದಿದೆ.
ಬೆಂಗಳೂರು, ದೆಹಲಿ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಮ್ಮಿ ಕಲ್ಚರ್ ಆಪ್ ಮೂಲಕ ವಂಚಿಸುತ್ತಿದ್ದವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಇಡಿ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

