HomeIndiaBIG NEWS: ಆನ್ ಲೈನ್ ಗೇಮಿಂಗ್ ನಲ್ಲಿ ಕೋಟಿ ಗೆದ್ದು ಸುದ್ದಿಯಾಗಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

BIG NEWS: ಆನ್ ಲೈನ್ ಗೇಮಿಂಗ್ ನಲ್ಲಿ ಕೋಟಿ ಗೆದ್ದು ಸುದ್ದಿಯಾಗಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಪುಣೆ: ಆನ್ ಲೈನ್ ಗೇಮಿಂಗ್ ಮೂಲಕ ಕೋಟ್ಯಂತರ ರೂಪಾಯಿ ಗೆದ್ದು ಭಾರಿ ಸುದ್ದಿಯಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಲಾಗಿದೆ.

ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೆ ಅಮಾನತುಗೊಂಡವರು. ಪುಣೆಯ ಪಿಂಪ್ರಿ ಚಿಂಚ್ ವಾಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಗೆ ಕಳಂಕ ತಂದ ಆರೋಪದಲ್ಲಿ ಸೋಮನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮನಾಥ್ ಝೆಂಡೆ ಇತ್ತೀಚೆಗೆ ಆನ್ ಲೈನ್ ಕ್ರಿಕೆಟ್ ಗೇಮ್ ನಲ್ಲಿ 1.5 ಕೋಟಿ ಬಹುಮಾನ ಗೆಲ್ಲುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ ಸೋಮನಾಥ್ ವಿರುದ್ಧ ತನಿಖೆ ಕೈಗೊಂಡಿತ್ತು. ತನಿಖಾ ವರದಿ ಬಂದ ಬೆನ್ನಲ್ಲೇ ಸೋಮನಾಥ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಗೌರವಕ್ಕೆ ಧಕ್ಕೆ ತಂದ ಕಾರಣಕ್ಕೆ ಹಾಗೂ ಅಶಿಸ್ತಿನ ವರ್ತನೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಮುಂದಿನ ಇಲಾಖಾವಾರು ವಿಚಾರಣೆಯನ್ನು ಉಪಪೊಲೀಸ್ ಆಯುಕ್ತರಿಗೆ ಒಪ್ಪಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಸತೀಶ್ ಮಾನೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular