ಪದ್ಮ ಪ್ರಶಸ್ತಿ-2024: ಸೆ. 15ರವರೆಗೆ ಆನ್ ಲೈನ್ ನಾಮನಿರ್ದೇಶನ

ನವದೆಹಲಿ:  2024 ರ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ನಾಮನಿರ್ದೇಶನವು ಈ ತಿಂಗಳ 15 ರವರೆಗೆ ತೆರೆದಿರುತ್ತದೆ.

ಈ ವರ್ಷದ ಮೇ 1 ರಂದು ನಾಮನಿರ್ದೇಶನ ಪ್ರಾರಂಭವಾಯಿತು. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಮುಂದಿನ ವರ್ಷದ ಗಣರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುವುದು. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳು ವಿಶಿಷ್ಟವಾದ ಕೆಲಸವನ್ನು ಗುರುತಿಸಲು ಪ್ರಯತ್ನಿಸುತ್ತವೆ. ಎಲ್ಲಾ ಕ್ಷೇತ್ರಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಾಗಿ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read