HomeKarnatakaವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.

ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ದಾಖಲೆಗಳ ಪರಿಶೀಲನೆಗೆ ಅಕ್ಟೋಬರ್ 7ರಿಂದ 18ರವರೆಗೆ ಆವಕಾಶ ಕಲ್ಪಿಸಲಾಗಿದೆ.

PG NEET ವೈದ್ಯಕೀಯ ಕೋರ್ಸ್ ಗಳಿಗೆ ಆನ್ ಲೈನ್ ಮೂಲಕ ನೋಂದಣಿ ಮಾಡಲು ಅ.7ರ ಮಧ್ಯಾಹ್ನ 2ಗಂಟೆವರೆಗೆ ಅವಕಾಶ ನೀಡಲಾಗಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿನ ದೋಷಗಳ ತಿದ್ದುಪಡಿಗೆ ಅ.7ರ ಸಂಜೆ 6ರವರೆಗೆ ಅವಕಾಶ‌ ನೀಡಲಾಗಿದೆ. ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

PG NEET- 24 ಪ್ರವೇಶ ಪರೀಕ್ಷೆಯಲ್ಲಿ ಅರ್ಹರಾದ ಹಾಗೂ ಪಿಜಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅ.7- 18ರವರೆಗೆ ಇಲ್ಲಿನ KEA ಕಚೇರಿಯಲ್ಲಿ ಮಾಡಲಾಗುತ್ತದೆ. UGNEET Rank ಆಧಾರದ ಮೇಲೆ ಪರಿಶೀಲನೆ ನಡೆಯಲಿದೆ. ವಿವರಗಳಿಗೆ ವೆಬ್ ಸೈಟ್ ಗೆ ಭೇಟಿ ನೀಡಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular