ಬೆಂಗಳೂರು: ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರುಗಳನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು 9 ಅಥವಾ 9 ಅನ್ನು ಮೀರದಂತೆ, ಅನಿವಾರ್ಯ ಸಂದರ್ಭದಲ್ಲಿ 13ಕ್ಕೆ ಮೀರದಂತೆ ಆಯ್ಕೆಯ ಅವಕಾಶ ಕಲ್ಪಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ, ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗಳ ನವೀಕರಣ ಕಾಮಗಾರಿಗಳನ್ನು ಒಟ್ಟು ₹542 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.
₹12.25 ಕೋಟಿ ವೆಚ್ಚದಲ್ಲಿ 35 ಸಂಚಾರಿ ಆರೋಗ್ಯ ಘಟಕಗಳ ದುರಸ್ತಿ ಮತ್ತು ಹೊಸ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ ಸದರಿ ವಾಹನಗಳನ್ನು Connected Health Ecosystem ಘಟಕಗಳಾಗಿ ಪರಿವರ್ತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ “ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ (ನಿಯಮಿತ)” ವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
₹391.82 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ಬೈರಮಂಗಲ ಕೆರೆಯ ದಡದಲ್ಲಿ 100 ಎ೦ಎಲ್‌ಡಿ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು 25 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ನಾಗನೂರು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹105.19 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಹಾವೇರಿ ಜಿಲ್ಲೆ ಬಂಕಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ತೆವರಮಳ್ಳಿ ಹಳ್ಳಿ ಕೆರೆ ಸುಧಾರಣಾ ಕಾಮಗಾರಿಗಳನ್ನು ₹92.84 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಮೋತಿ ತಲಾಬ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹153 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಬೆ೦ಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 1,000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‌ಗಳಿಗೆ ಅವಶ್ಯವಿರುವ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹20 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
₹398 ಕೋಟಿಗಳ ಅಂದಾಜು ಮೊತ್ತದಲ್ಲಿ ರಾಜ್ಯದ ಆಯ್ದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ₹50 ಕೋಟಿಗಳ ಅಂದಾಜು ಮೊತ್ತದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಿಂದ ಹೆಗ್ಗಾರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಗಂಗಾವಳಿ ನದಿಗೆ ಅಡ್ಡಲಾಗಿ ₹35 ಕೋಟಿ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ#CabinetDecisions pic.twitter.com/p0iP1PqFHV
— Siddaramaiah (@siddaramaiah) September 11, 2025