BIG NEWS: ಇನ್ನು ಬಿಪಿಎಲ್ ಮಾನದಂಡದಡಿ ಬಡವರಿಗೆ ಮಾತ್ರ ‘ಗ್ಯಾರಂಟಿ’ ಸೌಲಭ್ಯ: ಯೋಜನೆಗಳ ಪುನರ್ ಪರಿಶೀಲನೆ ಸುಳಿವು ನೀಡಿದ ಪರಮೇಶ್ವರ್

ತುಮಕೂರು: ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ಸಿಗುವಂತಾಗಬೇಕು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಸಚಿವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಪುನರ್ ಪರಿಶೀಲಿಸಲು ಸರ್ಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬಿಪಿಎಲ್ ಮಾನದಂಡ ಇಟ್ಟುಕೊಂಡು ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗುವಂತೆ ಮಾಡಬೇಕಿದೆ. ಈ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಂಡು ಸರ್ಕಾರಕ್ಕೆ ಏಕೆ ಕಳುಹಿಸಬಾರದು ಎಂದು ಹೇಳಿದ್ದಾರೆ.

ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ, 2 ಲಕ್ಷ ರೂಪಾಯಿ ಸಂಬಳ ಪಡೆದುಕೊಳ್ಳುವ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಮ್ಮದು ಅಷ್ಟೊಂದು ಶ್ರೀಮಂತರ ರಾಜ್ಯವೇ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಸಚಿವ ಪರಮೇಶ್ವರ ಇದು ಗಂಭೀರ ವಿಚಾರವಾಗಿದೆ. ಶ್ರೀಮಂತರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದು, ಇದನ್ನು ತಪ್ಪಿಸಬೇಕಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read