HomeLatest NewsGOOD NEWS: ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ: ಇನ್ನು ಮುಂದೆ ಇವೆಲ್ಲವೂ ಸರಳೀಕರಣ: 2...

GOOD NEWS: ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ: ಇನ್ನು ಮುಂದೆ ಇವೆಲ್ಲವೂ ಸರಳೀಕರಣ: 2 ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕೆ ಭೂ ಪರಿವರ್ತನೆ ಅಗತ್ಯವಿಲ್ಲ

ಬೆಂಗಳೂರು: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ.

⁠ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿ ಪಥದತ್ತ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

⁠ಕರ್ನಾಟಕ ಭೂ ಕಂದಾಯ ನಿಯಮಗಳು 1966 ಅನ್ನುಸಮಗ್ರವಾಗಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 1974ರಲ್ಲಿ ದೇವರಾಜು ಅರಸು ಭೂ ಸುಧಾರಣಾ ಕಾಯ್ದೆ 1961ಕ್ಕೆ 145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯ ನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿ ತಂದಿರುವುದು ಇದೇ ಮೊದಲು

⁠ಈ ತಿದ್ದುಪಡಿ ಮೂಲಕ ಕಂದಾಯ ನ್ಯಾಯಾಲಯಗಳನ್ನು ಪಾರದರ್ಶಕವಾಗಿ, ನಿಯಮಬದ್ಧವಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆ ಸರಳ- ಸುಲಲಿತ ನ್ಯಾಯದಾನ ನೀಡಲು ಬದ್ಧವಾಗಿದೆ.

⁠ಭೂ ಪರಿವರ್ತನೆಯನ್ನು ಸರಳೀಕೃತವಾಗಿ ಪ್ರಕ್ರಿಯೆಗೊಳಪಡಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಹಾಗೂ ಬಂಡವಾಳ ಹೂಡಿಕೆಗೆ ಹೂಡಿಕೆದಾರರ ಸ್ನೇಹಿಯಾಗಿ ಖರೀದಿಸಲಾದ ಭೂಮಿಗೆ ಭೂ ಪರಿವರ್ತನೆ ನೀಡಲು ಈ ತಿದ್ದುಪಡಿ ತರಲಾಗಿದೆ.

ಇನ್ನು ಮುಂದೆ ಇವೆಲ್ಲವೂ ಸರಳೀಕರಣ:

ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದು ಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ ಪ್ಲಾನ್‌ ಅಪ್ರೂವಲ್‌ಗೆ ಹೋಗಬಹುದು.

⁠ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.

⁠ಭೂ ಪರಿವರ್ತನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ  ನೀಡಲಾಗಿದೆ.

ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು.

⁠30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.

⁠ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ.

ಭಾರತ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.

⁠ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ.

⁠ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ.

ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ.

ಆರ್‌ಸಿಸಿಎಂಎಸ್‌ ಸೇರಿದಂತೆ ಡಿಜಿಟೈಸೇಷನ್‌ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಿದೆ.

ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗಾಗಿ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕ ಜಾರಿಗೊಳಿಸಲಾಗಿದೆ.

⁠ಕಂದಾಯ ನ್ಯಾಯಾಲಯಗಳನ್ನು ಆನ್‌ಲೈನ್‌ ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು ಆನ್‌ಲೈನ್‌ ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ.

⁠ಅದೇ ರೀತಿ ಭೂ ಸುರಕ್ಷಾ ಮೋಜನಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular