ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನು ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸೇವೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸೆಪ್ಟೆಂಬರ್ 10ರ ಬುಧವಾರದಿಂದ ನಾಲ್ಕನೇ ರೈಲು ಸಂಚಾರ ಆರಂಭಿಸಲಿದೆ. ಇದರಿಂದ ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ.

ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಕಳೆದ ವಾರದಿಂದ ರಾತ್ರಿ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಇದೀಗ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಪ್ರಸ್ತುತ ಹಳದಿ ಮಾರ್ಗದಲ್ಲಿ ಪ್ರತಿದಿನ ಸುಮಾರು 60 ಸಾವಿರ ಜನ ಓಡಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬೊಮ್ಮಸಂದ್ರ ನಡುವಿನ ಮಾರ್ಗದಲ್ಲಿ ಇರುವ ಐಟಿ ಕಚೇರಿಗಳಿಗೆ ತೆರಳುವವರು ಹೆಚ್ಚಾಗಿ ಮೆಟ್ರೋ ಬಳಸುತ್ತಿದ್ದಾರೆ. ಬೆಳಗ್ಗೆ ಪೀಕ್ ಅವರ್ ಸಮಯಕ್ಕಿಂತ ಹೆಚ್ಚಾಗಿ ಸಂಜೆ ವೇಳೆ ಸಂಚರಿಸುವವರ ಸಂಖ್ಯೆ ಶೇಕಡ 20ರಷ್ಟು ಹೆಚ್ಚಾಗಿದೆ.

3 ರೈಲುಗಳಿದ್ದರೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ರೈಲಿಗಾಗಿ 25 ನಿಮಿಷ ಕಾಯಬೇಕಾದ ಅನಿವಾರ್ಯತೆ ಇತ್ತು. ನಾಲ್ಕನೇ ರೈಲಿನ ಸೇರ್ಪಡೆಯಿಂದ ಪ್ರಯಾಣಿಕರಿಗೆ ಅನುಕೂಲವಾಗುವಲ್ಲಿದೆ. ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

 ಹಳದಿ ಮಾರ್ಗದಲ್ಲಿ ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಭಾನುವಾರ ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ರಾತ್ರಿ ಕೊನೆಯ ರೈಲು ಸಮಯ ಎಂದಿನಂತೆ ಇರಲಿದ್ದು, ಆರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 10:42ಕ್ಕೆ ಹೊರಡಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read