ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳಲ್ಲಿ 4,600 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 545 ಪಿಎಸ್ಐಗಳ ನೇಮಕಾತಿ, ತರಬೇತಿ ಪ್ರಗತಿಯಲ್ಲಿದ್ದು, ಹೊಸದಾಗಿ 402 ಪಿಎಸ್ಐ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಇನ್ನೂ 600 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 4600 ಕಾನ್ಸ್ಟೇಬಲ್ ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
