HomeKarnatakaBIG NEWS: ಅಪಪ್ರಚಾರವನ್ನು ಅಸ್ತ್ರ ಮಾಡಿಕೊಂಡು ಬಿಜೆಪಿಯನ್ನು ದುರ್ಬಲಗೊಳಿಸಲು ಯತ್ನ; ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ...

BIG NEWS: ಅಪಪ್ರಚಾರವನ್ನು ಅಸ್ತ್ರ ಮಾಡಿಕೊಂಡು ಬಿಜೆಪಿಯನ್ನು ದುರ್ಬಲಗೊಳಿಸಲು ಯತ್ನ; ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ಬಿಜೆಪಿ ನಾಯಕರ ವಿರುದ್ಧ ಅಪಪ್ರಚಾರ ಮಾಡಿ, ವಿಪಕ್ಷಗಳನ್ನು ದುರ್ಬಲಗೊಳಿಸುವ ಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ನ ಆಪರೇಷನ್ ಹಸ್ತ ವಿಚಾರವಾಗಿ, ಕಾಂಗ್ರೆಸ್ ನವರು ತಮ್ಮ ದೌರ್ಬಲ್ಯ ಮುಚ್ಚಿಕೊಳ್ಳಲು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯ ಯಾರೂ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರ್ ಬಂಗಾರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರಷ್ಟೇ ಅಲ್ಲ ಶಾಸಕರಾಗಿರುವ ಯಾರೂ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿಲ್ಲ. ಕಾಂಗ್ರೆಸ್ ನವರು ಅಪಪ್ರಚಾರವನ್ನು ಅಸ್ತ್ರವನ್ನಾಗಿಸಿ ವಿಪಕ್ಷಗಳನ್ನು ದುರ್ಬಲಗೊಳಿಸಲು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular