ನವದೆಹಲಿ: ಆಪರೇಷನ್ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿರುವ ಸೇನೆ ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೆನೆ ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದೆ.
ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಶನ್ ಶಿವಶಕ್ತಿ ಕಾರ್ಯಾಚರಣೆಯನ್ನು ಕೈಗೊಂಡಿದೆ. ಭಾರತೀಯ ಸೇನೆಯ 16 ಕಾರ್ಪ್ಸ್ ತುಕಡಿ ಈ ಕಾರ್ಯಾಚರಣೆ ನಡೆಸಿದೆ.
ಎನ್ ಕೌಂಟರ್ ನಲ್ಲಿ ಬಲಿಯಾದ ಉಗ್ರರ ಬಳಿ ಇದ್ದ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.