ಬೆಂಗಳೂರು: ಪಾಕಿಸ್ತಾನ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಆರಂಭಿಸಿದೆ. ಭಾರತೀಯ ಸೇನೆ ದಾಳಿಗೆ 100ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಈ ಮೂಲಕ ಪೆಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆ ಪ್ರತಿಕಾರ ತೀರಿಸಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನ ಶಾಂತಿ ಮಂತ್ರದ ಪೋಸ್ಟ್ ಬಿಜೆಪಿಯನ್ನು ಕೆರಳಿಸಿದೆ.
‘ಮನುಕುದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಅದು ಶಾಂತಿ’ ಎಂಬ ಮಹಾತ್ಮಾ ಗಾಂಧೀಜಿಯವರ ಸಂದೇಶವನ್ನು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಅಪರೇಷನ್ ಸಿಂಧೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ ಎಂದು ಗುಡುಗಿದ್ದಾರೆ.