ನವದೆಹಲಿ: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ಕ್ಷಿಪಣಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಂ ನಲ್ಲಿ ಉಗ್ರರ ಗುಂಡಿನ ದಾಳಿಗೆ 26 ಪ್ರವಾಸಿಗರು ಬಲಿಯಾದ ಘಟನೆಗೆ ಪ್ರತಿಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಉಗ್ರರ ನೆಲೆಗಳನ್ನು ನೆಲಸಮಗೊಳಿಸಿದೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಕ್ಷಣಾ ಇಲಾಖೆ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆದಿದ್ದು, ಬಳಿಕ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಹಾಗೂ ಮುಂದಿನ ನಡೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇತಿಯಾಗಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಹಾಗೂ ಉಗ್ರರ ವಿರುದ್ಧ ಮುಂದೆ ಸೇನೆ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.