ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದ್ದು, 11 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿದೆ.
ಮಂಗಳೂರಿನ ಉರ್ವ ಸಮೀಪದ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ವಲಸಿದರು ಪಶ್ಚಿಮ ಬಂಗಾಳ ನಿವಾಸಿಗಳು ಎಂದು ನಕಲಿ ವಿಳಾಸ ಬಳಸಿಕೊಂಡು ಕೆಲಸಕ್ಕೆ ಬಂದಿದ್ದರು. ನಾಲ್ವರು ಅಪ್ರಾಪ್ತರು ಸೇರಿದಂತೆ ಒಟ್ಟು 11 ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆಕ್ರಮ ವಲಸಿಗರ ಬಂಧಿಸಲಾಗಿದ್ದು, ಪಶ್ಚಿಮ ಬಂಗಾಳದ ಮೂಲದ ಓರ್ವ ಏಜೆಂಟ್ ವಿರುದ್ಧವೂ ಕೇಸು ದಾಖಲಿಸಲಾಗಿದೆ. ಮಂಗಳೂರಿನ ಉರ್ವ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವಲಸಿಗರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ ಇತರ ದಾಖಲೆ ಪತ್ತೆಯಾಗಿವೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನೆಲೆಸಿ ಎರಡು ಬೇರೆ ಬೇರೆ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಬಾಂಗ್ಲಾ ವಲಸಿಗರು ಕೆಲಸ ಮಾಡುತ್ತಿದ್ದರು.
ಬಂಧಿತ ಬಾಂಗ್ಲಾದೇಶಿ ಪ್ರಜೆಗಳನ್ನು ವಶದಲ್ಲಿಟ್ಟುಕೊಳ್ಳಲು ಮತ್ತು ಅವರ ದೇಶಕ್ಕೆ ಗಡಿಪಾರು ಮಾಡಲು ಅಗತ್ಯವಿರುವ ಆದೇಶ ಕೋರಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ವರದಿ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ ನಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರೊಂದಿಗೆ ಒಟ್ಟು 19 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಂತಾಗಿದೆ.

